ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ಳಾರೆ ವಲಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಹಸಿನಾ ಬಾನು ವಹಿಸಿದ್ದರು. ತಾಲ್ಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಳಂಜ ವಿಶ್ವನಾಥ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಜನಜಾಗೃತಿ ವೇದಿಕೆಯ ತಾಲೂಕು ನಿಕಟಪೂರ್ವ ಅಧ್ಯಕ್ಷ ಭವಾನಿ ಶಂಕರ ಅಡ್ತಲೆ ಭಾಗವಹಿಸಿ ದುಶ್ಚಟಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂತೋಷ್ ಕುಮಾರ್ ರೈ, ಬೆಳ್ಳಾರೆ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕೂಸಪ್ಪ ಗೌಡ ,ಪ್ರೌಢಶಾಲಾ ವಿಭಾಗದ ಶಿಕ್ಷಕಿ ನಾಗರತ್ನ ಭಾಗವಹಿಸಿದ್ದರು. ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳಿಧರ ಎ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ರಾಮಚಂದ್ರ ಭಟ್ ಸ್ವಾಗತಿಸಿ ಬೆಳ್ಳಾರೆ ಒಕ್ಕೂಟದ ಅಧ್ಯಕ್ಷ ವಸಂತ ಗೌಡ ವಂದಿಸಿದರು. ಸೇವಾ ಪ್ರತಿನಿಧಿಗಳಾದ ಯಶೋಧ, ಪವಿತ್ರ ಸಹಕರಿಸಿದರು. ಬಳಿಕ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವಂತಹ ವಿಡಿಯೋ ತೋರಿಸಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…