ತಿತಿಮತಿ-ಹುಣಸೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಪ್ರಸ್ತಾಪ : ಶಾಸಕ ಕೆ.ಜಿ.ಬೋಪಯ್ಯ ತೀವ್ರ ಅಸಮಾಧಾನ

August 26, 2019
10:00 AM

ಮಡಿಕೇರಿ :ತಿತಿಮತಿ- ಹುಣಸೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರವನ್ನು ನಿಷೇಧಿಸುವ ಪ್ರಸ್ತಾಪ ಡೋಂಗಿ ಪರಿಸರವಾದಿಗಳ ಹಾಗೂ ಅರಣ್ಯಾಧಿಕಾರಿಗಳ ಕೃಪಪೋಷಿತ ಹುನ್ನಾರ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ.

Advertisement
Advertisement
Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನ ಕೆಲ ಡೋಂಗಿ ಪರಿಸರವಾದಿಗಳು ತಿತಿಮತಿ- ಹುಣಸೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರವನ್ನು ನಿಷೇಧಿಸುವ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಳೆದ ಹಲವು ವರ್ಷಗಳಿಂದ ಷಡ್ಯಂತ್ರ ರೂಪಿಸುತ್ತಿದ್ದಾರೆ. ಹಾಗಾಗಿ ಈಗಿನ ಪ್ರಸ್ತಾಪವನ್ನು ಸಂಪೂರ್ಣವಾಗಿ ತಳ್ಳಿಹಾಕಲು ಸಾಧ್ಯವಿಲ್ಲ. ಈ ಬಗ್ಗೆ ಶೀಘ್ರದಲ್ಲೆ ಪರಿಶೀಲನೆ ನಡೆಸಿ ವಾಸ್ತವಾಂಶ ಪತ್ತೆಹಚ್ಚಲಾಗುವುದು. ಬಳಿಕ ಜನರ ಭಾವನೆಗಳಿಗೆ ಪೂರಕವಾಗಿ ಮುಂದುವರೆಯಲಾಗುವುದು ಎಂದು ಹೇಳಿದರು.ಯಾವುದೇ ಕಾರಣಕ್ಕೂ ಈ ಪ್ರಸ್ತಾಪ ಜಾರಿಯಾಗಬಾರದು, ಜನರಿಗೆ ತೊಂದರೆಯಾಗುವ ರೀತಿ ಯಾವುದೇ ಮಾರ್ಗಸೂಚಿ ಬದಲಾಗಬಾರದು ಎಂದು ಬೋಪಯ್ಯ ಹೇಳಿದರು.

Advertisement

ತಿತಿಮತಿ-ಹುಣಸೂರು ಮುಖ್ಯ ರಸ್ತೆಯ ಎಡಬದಿಯಲ್ಲಿರುವ ದೇವಮಚ್ಚಿ ಮತ್ತು ಮಾವುಕಲ್ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ವನ್ಯಜೀವಿ ವಲಯಕ್ಕೆ ಸೇರ್ಪಡೆಗೊಳಿಸುವ ಕ್ರಮ ಕೂಡ ಅರಣ್ಯ ಇಲಾಖೆಯ ಕಾನೂನುಬಾಹಿರ ಕ್ರಮವಾಗಿದೆ. ಇಲ್ಲಿ ಪಾಲಿಸಬೇಕಾದ ಯಾವ ನಿಯಮಾವಳಿಯನ್ನು ಕೂಡ ಅರಣ್ಯ ಇಲಾಖೆ ಪಾಲಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಕನಿಷ್ಠ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸಭೆಯ ಅನುಮೋದನೆಯನ್ನು ಕೂಡ ಪಡೆಯದೆ ಇಲಾಖೆಯ ಮೇಲ್ಮಟ್ಟದಲ್ಲಿ ಈ ಆದೇಶ ಮಾಡಲಾಗಿದೆ. ಸದಾ ಜನರಿಗೆ ವಿವಿಧ ರೀತಿಯಲ್ಲಿ ತೊಂದರೆ ನೀಡುವ ಅರಣ್ಯ ಇಲಾಖೆ ಇಲ್ಲಿಯೂ ಕೂಡ ತನ್ನ ಜನವಿರೋಧಿ ನೀತಿ ಅನುಸರಿಸಿದೆ. ಪರಿಸರವಾದಿಗಳ ಹಿಡಿತದಲ್ಲಿರುವ ಕೆಲ ಅರಣ್ಯಾಧಿಕಾರಿಗಳು ಅರಣ್ಯ ಭವನದಲ್ಲಿ ಕುಳಿತು ತಮ್ಮ ಮನಸೋಇಚ್ಚೆ ಆದೇಶ ನೀಡಿದರೆ ಕ್ಷೇತ್ರದ ಜನರ ಹಿತಾದೃಷ್ಠಿಯಿಂದ ಅದನ್ನು ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಇವರ ಜನವಿರೋಧಿ ನೀತಿಗಳನ್ನು ಎಲ್ಲಿ ಪ್ರಶ್ನೆ ಮಾಡಬೇಕೊ ಅಲ್ಲಿ ಮಾಡುತ್ತೇನೆ ಎಂದು ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ಉಂಟಾದ ಕೆಲ ಗೊಂದಲದ ವಾತವರಣದಿಂದಾಗಿ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅರಣ್ಯ ಖಾತೆ ವಹಿಸಿಕೊಳ್ಳುವ ಸಚಿವರಿಗೆ ಇಲ್ಲಿನ ವಾಸ್ತವಾಂಶವನ್ನು ಮನವರಿಕೆ ಮಾಡಿಕೊಟ್ಟು ಜನಜೀವನಕ್ಕೆ ಅನುಕೂಲವಾಗುವ ರೀತಿಯ ಆದೇಶ ಹೊರಡಿಸಲು ಪ್ರಯತ್ನಿಸಲಾಗುವುದು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror