ತುಳು ಶಿವಳ್ಳಿ ಬ್ರಾಹ್ಮಣ ಸಭಾ ಜಿಲ್ಲಾ ಸಂಘ ಅಸ್ತಿತ್ವಕ್ಕೆ

November 3, 2019
10:14 PM

ಸುಳ್ಯ: ಸಮಾಜಕ್ಕೆ ಸಂಸ್ಕಾರ ತುಂಬಲು ಮತ್ತು ಸಮಾಜದ ಧ್ಯೇಯ ಉದ್ದೇಶದ ಈಡೇರಿಕೆಗೆ ಸಂಘಟನೆ ಅತೀ ಅಗತ್ಯ ಎಂದು ಸುಬ್ರಹ್ಮಣ್ಯ ಮಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

Advertisement
Advertisement

ಸುಳ್ಯದ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ತುಳು ಶಿವಳ್ಳಿ ಬ್ರಾಹ್ಮಣ ಸಭಾದ ದಕ್ಷಿಣ ಕನ್ನಡ ಜಿಲ್ಲಾ ಸಂಘವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಮಾಜಕ್ಕೆ ಸಂಘಟನೆ ಅಗತ್ಯ. ಸಂಘಟನೆ ಇದ್ದರೆ ಹೆಚ್ಚು ಕೆಲಸ ಮಾಡಲು ಮತ್ತು ಉನ್ನತ ಸಾಧನೆ ಮಾಡಲು ಸಾಧ್ಯ‌. ನಾವು ಗಟ್ಟಿಯಾಗಲು, ನಮ್ಮ ಅಸ್ತಿತ್ವನ್ನು ವ್ಯಾಪಿಸಲು ಸಂಘಟಿತರಾಗಬೇಕಾಗಿದೆ ಎಂದು ಕರೆ ನೀಡಿದರು‌. ಜ್ಞಾನ ಸಂಪಾದನೆ ಮಾಡಿ ಅದನ್ನು ಸಮಾಜಕ್ಕೆ ನೀಡಿದರೆ ಮನುಷ್ಯ ಜೀವನ ಸಾರ್ಥಕವಾಗುತ್ತದೆ. ಸ್ವಂತ ಅಧ್ಯಯನ ನಡೆಸಿ ಜ್ಞಾನವನ್ನು ಸಮಾಜಕ್ಕೆ ಧಾರೆಯೆರೆಯಬೇಕು ಎಂದು ಅವರು ಹೇಳಿದರು.

Advertisement

ಮುಖ್ಯ ಅತಿಥಿಯಾಗಿದ್ದ ಮಂಗಳೂರು ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್ ಮಾತನಾಡಿ ಪ್ರತಿಯೊಬ್ಬನಿಗೂ ಒಂದು ಧರ್ಮ ಇದೆ. ಧರ್ಮ ಎಂದರೆ ಆತನ ಗುಣ. ಆಚಾರ,ವಿಚಾರ ವೃತಾನುಷ್ಠಾನ, ನಿಯಮ ಸಂಸ್ಕಾರದಿಂದ ಆ ಗುಣವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯ. ಆ ಮೂಲಕ ಸರ್ವ ಚರಾಚರಗಳ ಶ್ರೇಯಾಭಿವೃದ್ಧಿಗೆ ಕೆಲಸ ಮಾಡಲು ಸಾಧ್ಯ. ನಮ್ಮ ಸಮಾಜಕ್ಕೆ ತೊಂದರೆ ಉಂಟಾದರೆ ಅದನ್ನು ಎದುರಿಸಲು ಸಂಘಟನೆ ಅಗತ್ಯ ಎಂದು ಅವರು ಹೇಳಿದರು.

Advertisement

ತುಳು ಶಿವಳ್ಳಿ ಬ್ರಾಹ್ಮಣ ಸಭಾದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಎಂ.ಎಂ. ದಯಾಕರ್ ಮತ್ತು ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಅಧ್ಯಕ್ಷೆ ಮಮತಾ ಮೂಡಿತ್ತಾಯ, ಕಾರ್ಯದರ್ಶಿ ರಾಮಚಂದ್ರ ಸೋಮಯಾಗಿ, ನೂತನ ಜಿಲ್ಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ಮೂಡಿತ್ತಾಯ, ಉಪಾಧ್ಯಕ್ಷ ವಾದಿರಾಜ ಮಡಮಣ್ಞಾಯ, ಸುಜಾತಾ ಸೋಮಯಾಗಿ, ಹರೀಶ್ ಪುತ್ತೂರಾಯ, ಗಣೇಶ್ ಹೆಬ್ಬಾರ್, ರಾಘವೇಂದ್ರ ಬೈಪಡಿತ್ತಾಯ, ಬಾಲಕೃಷ್ಣ ಮೂಡಂಬಡಿತ್ತಾಯ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಿ. 13ರಿಂದ 15ರವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಮಹಾ ಸಮ್ಮೇಳನದ ಪೋಸ್ಟರ್ ಈ ಸಂದರ್ಭದಲ್ಲಿ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಬಿಡುಗಡೆ ಮಾಡಿದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror