ಸುಳ್ಯ: ಸಮಾಜಕ್ಕೆ ಸಂಸ್ಕಾರ ತುಂಬಲು ಮತ್ತು ಸಮಾಜದ ಧ್ಯೇಯ ಉದ್ದೇಶದ ಈಡೇರಿಕೆಗೆ ಸಂಘಟನೆ ಅತೀ ಅಗತ್ಯ ಎಂದು ಸುಬ್ರಹ್ಮಣ್ಯ ಮಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸುಳ್ಯದ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ತುಳು ಶಿವಳ್ಳಿ ಬ್ರಾಹ್ಮಣ ಸಭಾದ ದಕ್ಷಿಣ ಕನ್ನಡ ಜಿಲ್ಲಾ ಸಂಘವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಮಾಜಕ್ಕೆ ಸಂಘಟನೆ ಅಗತ್ಯ. ಸಂಘಟನೆ ಇದ್ದರೆ ಹೆಚ್ಚು ಕೆಲಸ ಮಾಡಲು ಮತ್ತು ಉನ್ನತ ಸಾಧನೆ ಮಾಡಲು ಸಾಧ್ಯ. ನಾವು ಗಟ್ಟಿಯಾಗಲು, ನಮ್ಮ ಅಸ್ತಿತ್ವನ್ನು ವ್ಯಾಪಿಸಲು ಸಂಘಟಿತರಾಗಬೇಕಾಗಿದೆ ಎಂದು ಕರೆ ನೀಡಿದರು. ಜ್ಞಾನ ಸಂಪಾದನೆ ಮಾಡಿ ಅದನ್ನು ಸಮಾಜಕ್ಕೆ ನೀಡಿದರೆ ಮನುಷ್ಯ ಜೀವನ ಸಾರ್ಥಕವಾಗುತ್ತದೆ. ಸ್ವಂತ ಅಧ್ಯಯನ ನಡೆಸಿ ಜ್ಞಾನವನ್ನು ಸಮಾಜಕ್ಕೆ ಧಾರೆಯೆರೆಯಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್ ಮಾತನಾಡಿ ಪ್ರತಿಯೊಬ್ಬನಿಗೂ ಒಂದು ಧರ್ಮ ಇದೆ. ಧರ್ಮ ಎಂದರೆ ಆತನ ಗುಣ. ಆಚಾರ,ವಿಚಾರ ವೃತಾನುಷ್ಠಾನ, ನಿಯಮ ಸಂಸ್ಕಾರದಿಂದ ಆ ಗುಣವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯ. ಆ ಮೂಲಕ ಸರ್ವ ಚರಾಚರಗಳ ಶ್ರೇಯಾಭಿವೃದ್ಧಿಗೆ ಕೆಲಸ ಮಾಡಲು ಸಾಧ್ಯ. ನಮ್ಮ ಸಮಾಜಕ್ಕೆ ತೊಂದರೆ ಉಂಟಾದರೆ ಅದನ್ನು ಎದುರಿಸಲು ಸಂಘಟನೆ ಅಗತ್ಯ ಎಂದು ಅವರು ಹೇಳಿದರು.
ತುಳು ಶಿವಳ್ಳಿ ಬ್ರಾಹ್ಮಣ ಸಭಾದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಎಂ.ಎಂ. ದಯಾಕರ್ ಮತ್ತು ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಅಧ್ಯಕ್ಷೆ ಮಮತಾ ಮೂಡಿತ್ತಾಯ, ಕಾರ್ಯದರ್ಶಿ ರಾಮಚಂದ್ರ ಸೋಮಯಾಗಿ, ನೂತನ ಜಿಲ್ಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ಮೂಡಿತ್ತಾಯ, ಉಪಾಧ್ಯಕ್ಷ ವಾದಿರಾಜ ಮಡಮಣ್ಞಾಯ, ಸುಜಾತಾ ಸೋಮಯಾಗಿ, ಹರೀಶ್ ಪುತ್ತೂರಾಯ, ಗಣೇಶ್ ಹೆಬ್ಬಾರ್, ರಾಘವೇಂದ್ರ ಬೈಪಡಿತ್ತಾಯ, ಬಾಲಕೃಷ್ಣ ಮೂಡಂಬಡಿತ್ತಾಯ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಿ. 13ರಿಂದ 15ರವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಮಹಾ ಸಮ್ಮೇಳನದ ಪೋಸ್ಟರ್ ಈ ಸಂದರ್ಭದಲ್ಲಿ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಬಿಡುಗಡೆ ಮಾಡಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…