ತೆರಿಗೆ ತಪ್ಪಿಸಿ ಅಡಿಕೆ ಸಾಗಾಟಕ್ಕೆ ಯತ್ನ | ತೆರಿಗೆ ಇಲಾಖಾ ಅಧಿಕಾರಿಗಳಿಂದ ದಾಳಿ | 1 ಕೋಟಿಗೂ ಅಧಿಕ ದಂಡ |

June 5, 2020
3:01 PM

ಮಂಗಳೂರು: ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಅಡಿಕೆ ಸಾಗಾಟದ ಮೇಲೆ ನಿಗಾ ಇರಿಸಿದ್ದಾರೆ. ಇದೀಗ  ಶಿವಮೊಗ್ಗ ಮತ್ತು ಸಾಗರ ದಲ್ಲಿ ಬುಧವಾರ 13 ಸ್ಥಳಗಳಲ್ಲಿ  ನಡೆಸಿದ ಕಾರ್ಯಾಚರಣೆಯಲ್ಲಿ  11 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಅನಧಿಕೃತವಾಗಿ ಸಂಗ್ರಹಿಸಿದ್ದನ್ನು  ಪತ್ತೆ ಮಾಡಿದ್ದು ಜಿಎಸ್‌ಟಿ ಅಡಿಯಲ್ಲಿ  1.1 ಕೋಟಿ ತೆರಿಗೆ ಮತ್ತು ದಂಡವನ್ನು ವಿಧಿಸಿದ್ದಾರೆ.

ಕಳೆದ ವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ  ಐದು ಗೋದಾಮುಗಳಲ್ಲಿ  3.1 ಕೋಟಿ ಮೌಲ್ಯದ ಅಡಿಕೆಯನ್ನು ಪತ್ತೆ ಮಾಡಿ 31 ಲಕ್ಷ ತೆರಿಗೆ ವಿಧಿಸಿದ್ದರು. ಅದಕ್ಕೂ ಮೊದಲು ಮಂಗಳೂರು ಸೇರಿದಂತೆ ವಿವಿದೆಡೆ ದಾಳಿ ನಡೆಸಿದ ತೆರಿಗೆ ಇಲಾಖಾ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅಡಿಕೆಯನ್ನು  ಸೂಕ್ತವಾದ ದಾಖಲೆಗಳಿಲ್ಲ ಸಾಗಾಟ ಮಾಡುವುದು ಹಾಗೂ ಸಂಗ್ರಹ ಮಾಡಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ  ಈ ದಾಳಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗ , ಸಾಗರದಲ್ಲಿಯೂ ಕೂಡಾ ದೊಡ್ಡ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಇರುವುದರ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬುಧವಾರ ಮುಂಜಾನೆ ಶಿವಮೊಗ್ಗದ ಒಂಬತ್ತು ಸ್ಥಳಗಳಲ್ಲಿ ಮತ್ತು ಸಾಗರದ  ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ತೆರಿಗೆ ತಪ್ಪಿಸಿ ಅಡಿಕೆ ಸಾಗಾಟ ಮಾಡುವ ಹಾಗೂ ಅಡಿಕೆ ಗ್ರೇಡ್ ಗಳಲ್ಲಿ ವಂಚನೆ ಬಗ್ಗೆಯೂ ತೆರಿಗೆ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ ಎಂದು ತಿಳಿದುಬಂದಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror