ಬೆಂಗಳೂರು/ನವದೆಹಲಿ:ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಕಚ್ಚಾತೈಲ ಬೆಲೆ ಏರಿಕೆಯಾಗಿದೆ. ಈ ಕಾರಣದಿಂದ ಭಾರತದಲ್ಲಿ ತೈಲ ಬೆಲೆ ಏರಿಕೆಯ ಸಾಧ್ಯತೆ ಇದೆ. ಈಗಾಗಲೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ ಶೇ.10.68 ರಷ್ಟು ಏರಿಕೆಯಾಗಿದೆ. ಇದು ಭಾರತದ ಮಾರುಕಟ್ಟೆಯ ಮೇಲೆ ದೊಡ್ಡ ಪ್ರಮಾಣದ ಬೆಲೆ ಏರಿಕೆಗೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿದೆ. ಈಗಿನ ಅಂದಾಜು ಪ್ರಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಶೀಘ್ರದಲ್ಲಿ 4 ರಿಂದ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ಕಳೆದ ಶನಿವಾರ ಡ್ರೋನ್ ದಾಳಿಯಾಗಿರುವ ಪರಿಣಾಮವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದು ಈ ಕಾರಣದಿಂತ ತೈಲ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಹೇಳಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?