Advertisement
Categories: Uncategorized

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

Share

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.

ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ  ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.

ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು  ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

19 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

22 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago