ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel