ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 199 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. 90 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಕೊರೋನಾ ಸೋಂಕಿನೊಂದಿಗೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ನಿವಾಸಿಗಳಾದ 71, 72 ಹಾಗೂ 70 ವರ್ಷದ ಇಬ್ಬರು ವೃದ್ಧರು, ಪುತ್ತೂರಿನ 55 ವರ್ಷದ ವ್ಯಕ್ತಿ, ಮಂಗಳೂರಿನ 56 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 123 ಮಂದಿ ಸಾವನ್ನಪ್ಪಿದಂತಾಗಿದೆ.
ಭಾನುವಾರ ಜಿಲ್ಲೆಯಲ್ಲಿ ಪತ್ತೆಯಾದ 199 ಪಾಸಿಟಿವ್ ಪ್ರಕರಣಗಳ ಪೈಕಿ 31 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಕಂಡುಬಂದಿದೆ. ಸಾಮಾನ್ಯ ಶೀತ ಜ್ವರ ಪ್ರಕರಣ 73, ಉಸಿರಾಟ ಸಮಸ್ಯೆಯ 10 ಪ್ರಕರಣ ಹಾಗೂ ಒಬ್ಬರು ಅಂತಾರಾಷ್ಟ್ರೀಯ ಪ್ರಯಾಣ ಮಾಡಿದವರಲ್ಲಿ ಸೋಂಕು ಪತ್ತೆಯಾಗಿದೆ. 83 ಮಂದಿಯ ಸೋಂಕಿನ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4811 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 2217 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2471 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…