ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 246 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಇಂದು 641 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಇಂದಿನ 246 ಪ್ರಕರಣಗಳ ಜೊತೆಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 8071 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ ಆಸ್ಪತ್ರೆಯಲ್ಲಿ 1948 ಸಕ್ರಿಯ ಕೊರೊನ ಪ್ರಕರಣಗಳಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ ಇನ್ನೂರೈವತ್ತಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು-150, ಬಂಟ್ವಾಳ-47, ಸುಳ್ಯ-7, ಬೆಳ್ತಂಗಡಿ-15, ಪುತ್ತೂರು-16 , ಹೊರಜಿಲ್ಲೆಯವರು-11 ಪ್ರಕರಣಗಳಿವೆ.
ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.12ರಂದು ನಡೆದ ರ್ಯಾಂಡಮ್ ಆಂಟಿಜೆನಿಕ್ ಪರೀಕ್ಷೆಯಲ್ಲಿ ಇಬ್ಬರು ವ್ಯಕ್ತಿಗಳ ವರದಿ ಪಾಸಿಟಿವ್ ಬಂದಿದೆ.
ಬೆಳ್ಳಾರೆಯ ಪಿಡಿಒ ಅವರಿಗೂ ಕೋವಿಡ್ ಸೋಂಕಿರುವುದು ದೃಢ ಪಟ್ಟಿದ್ದು, ಇಂದು ಮಧ್ಯಾಹ್ನದಿಂದ ಪಂಚಾಯತ್ ಕಛೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಬೆಳ್ಳಾರೆಯಲ್ಲಿ ರ್ಯಾಂಡಮ್ ಟೆಸ್ಟ್ ವೇಳೆ ಪಿಡಿಒರವರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಪಿಡಿಒ ಜೊತೆ ಸಂಪರ್ಕ ಇದ್ದವರು ರ್ಯಾಂಡಮ್ ಟೆಸ್ಟ್ ಗೆ ಒಳಪಡಲು ಮನವಿ ಮಾಡಲಾಗಿದೆ.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…