Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 246 ಕೊರೋನಾ ಪಾಸಿಟಿವ್ ಪ್ರಕರಣಗಳು

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 246 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಇಂದು 641 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.

ಇಂದಿನ 246 ಪ್ರಕರಣಗಳ ಜೊತೆಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 8071 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ ಆಸ್ಪತ್ರೆಯಲ್ಲಿ 1948 ಸಕ್ರಿಯ ಕೊರೊನ ಪ್ರಕರಣಗಳಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ ಇನ್ನೂರೈವತ್ತಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು-150, ಬಂಟ್ವಾಳ-47, ಸುಳ್ಯ-7, ಬೆಳ್ತಂಗಡಿ-15, ಪುತ್ತೂರು-16 , ಹೊರಜಿಲ್ಲೆಯವರು-11 ಪ್ರಕರಣಗಳಿವೆ.

ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.12ರಂದು  ನಡೆದ ರ್ಯಾಂಡಮ್  ಆಂಟಿಜೆನಿಕ್ ಪರೀಕ್ಷೆಯಲ್ಲಿ ಇಬ್ಬರು ವ್ಯಕ್ತಿಗಳ ವರದಿ ಪಾಸಿಟಿವ್ ಬಂದಿದೆ.

ಬೆಳ್ಳಾರೆಯ ಪಿಡಿಒ ಅವರಿಗೂ ಕೋವಿಡ್ ಸೋಂಕಿರುವುದು ದೃಢ ಪಟ್ಟಿದ್ದು,  ಇಂದು ಮಧ್ಯಾಹ್ನದಿಂದ ಪಂಚಾಯತ್ ಕಛೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಬೆಳ್ಳಾರೆಯಲ್ಲಿ ರ್ಯಾಂಡಮ್ ಟೆಸ್ಟ್‌ ವೇಳೆ ಪಿಡಿಒರವರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿರುವುದಾಗಿ ತಿಳಿದು ಬಂದಿದೆ.‌ ಪಿಡಿಒ ಜೊತೆ ಸಂಪರ್ಕ ಇದ್ದವರು ರ್ಯಾಂಡಮ್ ಟೆಸ್ಟ್ ಗೆ ಒಳಪಡಲು ಮನವಿ ಮಾಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

20 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

20 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago