ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.
ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ದಿಢೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.