ಮಡಿಕೇರಿ : ಮಹಾಮಳೆಯ ಪ್ರವಾಹದಿಂದ ಕಂಗೆಟ್ಟಿದ್ದ ದಕ್ಷಿಣ ಕೊಡಗಿನ ರೈತರಿಗೆ ಹಾಗೂ ಬೆಳೆಗಾರರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂಡು ವಿರಾಜಪೇಟೆ ತಾಲ್ಲೂಕಿನ ವಿವಿಧೆಡೆ ಲಗ್ಗೆ ಇಟ್ಟಿದ್ದು, ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.
ಶ್ರೀಮಂಗಲ ಗ್ರಾ.ಪಂ. ವ್ಯಾಪ್ತಿಯ ಕುರ್ಚಿ ಗ್ರಾಮದ ಎ.ಬಿ. ನಾಚಪ್ಪ ಮತ್ತು ಎ.ಟಿ. ಬೊಳ್ಳಮ್ಮ ಅವರ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡುಗಳು ಫಸಲು ಇರುವ ಕಾಫಿ ಗಿಡಗಳನ್ನು ಬುಡ ಸಹಿತ ತುಳಿದು ಹಾಕಿದೆ, ಅಡಿಕೆ, ಕಾಳು ಮೆಣಸು ಫಸಲನ್ನು ಕೂಡ ನಾಶ ಮಾಡಿವೆ.ಅತಿವೃಷ್ಟಿಯಿಂದ ಭಾರೀ ನಷ್ಟ ಉಂಟಾಗಿರುವ ಬೆನ್ನಲ್ಲೇ ಅಳಿದುಳಿದ ಬೆಳೆಯನ್ನು ಕಾಡಾನೆಗಳು ನುಗ್ಗಿ ನಾಶಪಡಿಸುತ್ತಿದ್ದು, ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೆಳೆಗಾರ ಎ.ಬಿ.ನಾಚಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಮತ್ತೊಂದೆಡೆ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ, ಅಮ್ಮತ್ತಿ, ಸಿದಾಪುರ ಭಾಗದಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಅಪಾರ ಪ್ರಮಾಣದ ಕೃಷಿ ಫಸಲು ನಾಶದೊಂದಿಗೆ ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ರೈತರು ಬೆಳೆದ ಭತ್ತ, ಕಾಫಿ, ತೆಂಗು, ಬಾಳೆ, ಅಡಕೆ ಸೇರಿದಂತೆ ಇತರ ಕೃಷಿ ಫಸಲುಗಳನ್ನು ಕಾಡಾನೆಗಳು ತುಳಿದು, ತಿಂದು ನಾಶ ಮಾಡುವ ಮೂಲಕ ಭಾರೀ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿವೆ.
ರಾತ್ರಿ ಮಾತ್ರವಲ್ಲದೆ, ಹಾಡಹಗಲಿನಲ್ಲೂ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳ ಹಿಂಡಿನ ಭಯದಿಂದ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ಯಾಂಕ್ ಹಾಗೂ ಕೈ ಸಾಲ ಮಾಡಿ ಬೆಳೆಸಿದ ಕೃಷಿಯನ್ನು ಕಾಡಾನೆಗಳು ತುಳಿದು ತಿಂದು ನಾಶ ಮಾಡುವ ಮೂಲಕ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿವೆ.ಇದರಿಂದ ರೈತರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿರುವ ಕೃಷಿಕರು ಸರಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಹೆಚ್ಚಿನ ಮೊತ್ತದಲ್ಲಿ ಪರಿಹಾರ ನೀಡುವ ಮೂಲಕ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…