ಮಡಿಕೇರಿ :ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಮತ್ತೆ ಪ್ರವಾಹದ ಆತಂಕ ಸೃಷ್ಟಿಸಿದ್ದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಮಳೆ ಶಾಂತವಾಗಿದ್ದರೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ.
ದಕ್ಷಿಣ ಕೊಡಗಿನ ಭಾಗಗಳಲ್ಲಿ ಭಾರೀ ಮಳೆಯಿಂದ ಲಕ್ಷ್ಮಣತೀರ್ಥ ಮತ್ತು ಕೇರಳದತ್ತ ಸಾಗುವ ಬರಪ್ಪೊಳೆ ಉಕ್ಕಿ ಹರಿಯುತ್ತಿದ್ದು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಡಿಕೇರಿಯಲ್ಲಿ ಶುಕ್ರವಾರ ತಿಳಿ ಬಿಸಿಲಿನ ವಾತಾವರಣ ಕಂಡು ಬಂದಿತ್ತಾದರೂ ಸೋಮವಾರಪೇಟೆಯಲ್ಲಿ ಬಿಸಿಲು ಕಾಣದೆ ವಾರವೇ ಕಳೆದಿದೆ.
ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದೊಂದು ದಿನದ ಅವಧಿಯಲ್ಲಿ 4 ಇಂಚು ಮಳೆ ದಾಖಲಾಗಿದೆ. ಶುಕ್ರವಾರ ಮಳೆಯ ತೀವ್ರತೆ ಇಳಿಮುಖಗೊಂಡು ಮಡಿಕೇರಿ ರಸ್ತೆಯ ಮೇಲೆ ಹರಿಯುತ್ತಿದ್ದ ಪ್ರವಾಹದ ನೀರು ಇಳಿದು ಸಂಚಾರ ಪುನರಾರಂಭಗೊಂಡಿದೆ. ನಾಪೋಕ್ಲು ರಸ್ತೆಯಲ್ಲಿ ಪ್ರವಾಹದ ನೀರು ಇನ್ನಷ್ಟೆ ಇಳಿಯಬೇಕಿದೆ.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿನ್ನೆ ಬೆಳಗ್ಗಿನಿಂದ ಇಂದು ಬೆಳಗ್ಗಿನವರೆಗೆ ಒಂದು ಇಂಚು ಮಳೆ ದಾಖಲಾಗಿದ್ದರೆ, ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಲ್ಲಿ ಅಲ್ಪಸ್ವಲ್ಪ ಮಳೆಯಷ್ಟೆ ಆಗುತ್ತಿರುವ ಬಗ್ಗೆ ವರದಿಯಾಗಿದೆ. ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ, ಪೊನ್ನಂಪೇಟೆಗಳಲ್ಲಿ ಮಳೆ ಕ್ಷೀಣಿಸಿದ್ದರೆ, ಬಾಳೆಲೆ, ಹುದಿಕೇರಿ, ಶ್ರೀಮಂಗಲ ವಿಭಾಗಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಲಕ್ಷ್ಮಣ ತೀರ್ಥ ನದಿಯ ನೀರಿನ ಮಟ್ಟ ಹೆಚ್ಚುತ್ತಿದ್ದು, ಗದ್ದೆ ಬಯಲುಗಳು ಪ್ರವಾಹದಿಂದ ಆವೃತ್ತವಾಗಿದೆ. ಬರಪ್ಪೊಳೆಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಸಿದ್ದಾಪುರದ ಕರಡಿಗೋಡು ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿವೆ.
ಸೋಮವಾರಪೇಟೆಯ ಪುಷ್ಪಗಿರಿ ತಪ್ಪಲಿನ ಶಾಂತಳ್ಳಿ ವಿಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…