ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಆದೇಶ ನೀಡಿದ್ದಾರೆ.
ಮುಂಜಾಗರೂಕತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 20-12-2019 ರಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್, ಪದವಿ ತರಗತಿಯೂ ಸೇರಿ) ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಲಾಗಿದೆ’, ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಂದು ಎಲ್ಲಾ ಮದ್ಯದಂಗಡಿ, ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳನ್ನೂ ಸಹ ಮುಚ್ಚುವಂತೆ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…