Advertisement
ಸುದ್ದಿಗಳು

ದಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ : ಡಿ.20 ರಂದು ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೊಷಣೆ

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ  ನಡೆದ ಪ್ರತಿಭಟನೆಯ ವೇಳೆ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ  ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ  ಸಿಂಧು ಬಿ ರೂಪೇಶ್ ಅವರು ಆದೇಶ ನೀಡಿದ್ದಾರೆ.

ಮುಂಜಾಗರೂಕತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  20-12-2019 ರಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್, ಪದವಿ ತರಗತಿಯೂ ಸೇರಿ) ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಲಾಗಿದೆ’, ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಂದು ಎಲ್ಲಾ ಮದ್ಯದಂಗಡಿ, ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳನ್ನೂ ಸಹ ಮುಚ್ಚುವಂತೆ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

3 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

1 day ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

1 day ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 days ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago