ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಇಂದು ಮಂಗಳೂರಿಗೆ ಆಗಮಿಸಿದರು.
ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.
ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು.ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.
ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…