ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

October 2, 2019
10:05 AM

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ
ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ
December 6, 2024
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror