ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.