ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.
ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.
ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…