ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಾಗಿ ಗ್ರಾಮ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಯಿತು.
ಗ್ರಾಮ ಪಂಚಾಯತ್ಅಧ್ಯಕ್ಷರಾದ ದಿವಾಕರ ಮುಂಡೋಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ದೇವಚಳ್ಳ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಕಂದಾಯ ಸಹಾಯಕರು ದೀಪಕ್, ಜ್ಞಾನ ದೀಪ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಸ್ವಾಗತಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ನಮ್ಮನ್ನು ಹಾಗೂ ಎಲ್ಲರನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಸೋಂಕನ್ನು ನಿವಾರಿಸುವ ಬಗ್ಗೆ ಸಂಘಟಿತ ಜವಾಬ್ದಾರಿಗಳ ಬಗ್ಗೆ ಮತ್ತು ಆರೋಗ್ಯ ಸಹಾಯಕರು ನಾಗರಿಕನ ಜವಾಬ್ದಾರಿಗಳ ಬಗ್ಗೆ ಅನುಸರಿಸಬೇಕಾದ ವೈದ್ಯಕೀಯ ಅಂಶಗಳನ್ನು ತಿಳಿಸಿದರು. ಬಳಿಕ ಸಮಿತಿಯನ್ನು ರಚಿಸಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…