ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಗ್ಗೆ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿದರು. ಬಳಿಕ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ನಂತರ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಕೊಕ್ಕಡ ವೈದ್ಯನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ,ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಇನ್ನಿತರರು ಜೊತೆಗಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel