ದೇವಸ್ಥಾನಗಳ ಅಡುಗೆ ಕೋಣೆಗಳಿಗೆ ಸಿಸಿ ಟಿವಿ  ಕಡ್ಡಾಯವಾಗಲಿ- ಸಚಿವ ಶ್ರೀನಿವಾಸ ಪೂಜಾರಿ

September 28, 2019
11:00 AM
Advertisement

ಮಂಗಳೂರು:  ದೇವಸ್ಥಾನಗಳ ಅಡುಗೆ ಕೋಣೆಗಳಿಗೆ ಸಿಸಿ ಟಿವಿ ಕಡ್ಡಾಯವಾಗಬೇಕು.  ಸರಕಾರಿ ಮತ್ತು ಖಾಸಗಿ ದೇವಾಲಯಗಳಲ್ಲಿ ಸಿಸಿ ಟಿವಿಯ ಅಳವಡಿಕೆಗೆ ಶೀಘ್ರ ಸೂಚನೆ ನೀಡಿ ಅಳವಡಿಸುವಂತೆ  ದೇವಾಲಯಗಳ ಆಡಳಿತ ಮಂಡಳಿ  ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

Advertisement
Advertisement
Advertisement

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಸರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ದಸರಾ ಮೆರವಣಿಗೆಗೆ ಸಂಬಂಧಪಟ್ಟಂತೆ ರಸ್ತೆ ಬದಿಯಲ್ಲಿ ಅಡಚಣೆಯಾಗುವ ಮರಗಳ ಕೊಂಬೆಗಳನ್ನು ಕಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದರು.
ದಸರಾ ಸಂಧರ್ಭದಲ್ಲಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಪ್ರಸಾದಗಳನ್ನು ನೀಡುವುದು ಅಥವಾ ಇನ್ನಿತರ ಕಡೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ  ಹಬ್ಬ ಮತ್ತು ಉಳಿದ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಾಣಿಸಬಾರದು, ಇದರ ಕುರಿತು ಆಯಾ ದೇವಾಲಯಗಳ ಆಡಳಿತ ಮಂಡಳಿ ಗಮನ ಹರಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದರು.

Advertisement

  ದೇಶದಲ್ಲಿ ಜಾಗತಿಕವಾಗಿ ಹಬ್ಬಿಕೊಂಡಿರುವ ಭಯೋತ್ಪಾದಕ ಕುರುಹುಗಳು ಕರಾವಳಿ ಪ್ರದೇಶದಲ್ಲಿಯೂ ಕಂಡು ಬಂದಿದೆ. ಆದ್ದರಿಂದ ಹಬ್ಬದ ಸಂಧರ್ಭಗಳಲ್ಲಿ ಅಪರಿಚಿತ ವ್ಯಕ್ತಿಗಳು  ಕಂಡು ಬಂದು ಕೆಲಸ ಕಾರ್ಯಗಳಲ್ಲಿ ಕೈಜೋಡಿಸಲು ಮುಂದಾದರೆ ಅವಕಾಶ ಕೊಡದೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ಕಳುಹಿಸಬೇಕು. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತರು ಪಿ.ಎಸ್  ಹರ್ಷ ತಿಳಿಸಿದರು.  

ಸರಿಯಾದ ದಾಖಲಾತಿ ಹೊಂದಿದ ಗಾಡಿಗಳನ್ನು ಮೆರವಣಿಗೆಯಲ್ಲಿ ಬಳಸುವಂತೆ ಸೂಚಿಸಲಾಯಿತು. ವಿದ್ಯುತ್ ಬಳಕೆಯಲ್ಲಿ ಅತಿಯಾದ ಜಾಗರೂಕತೆ ಮುಖ್ಯ. ಆಹಾರ ವ್ಯವಸ್ಥೆಯು ಅಚ್ಚುಕಟ್ಟಾಗಿ, ಮಿತವ್ಯಯವಾಗಿ ಬಳಸುವಂತೆ ನೋಡಿಕೊಳ್ಳಬೇಕು.  ಮುಖ್ಯವಾಗಿ ವಯಸ್ಕರರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಮತ್ತು ವಿಕಲಚೇತನರಿಗೆ ವಿಶೇಷ ವ್ಯವಸ್ಥೆ ಮಾಡುವಂತೆ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸೂಚಿಸಲಾಯಿತು.  ದಸರಾ ಸಂಧರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ   24 ಗಂಟೆ ನಿರಂತರ ಸೇವೆ ಒದಗಿಸಲಾಗುವುದು ಎಂದು ಹೇಳಿದರು.

Advertisement

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಜಿಲ್ಲಾ ಪೊಲೀಸ್ ಆಯುಕ್ತರು ಅರುಣಾಂಶು ಗಿರಿ, ಶಾಸಕ ವೇದವ್ಯಾಸ್ ಕಾಮತ್, ಮಹಾನಗರಪಾಲಿಕೆ ಆಯುಕ್ತರು ಎಸ್. ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror