ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 40,425 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. 681 ಜನರು ಮೃತಪಟ್ಟಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11 ಲಕ್ಷ ತಲಪಿದೆ.
ದೇಶದಲ್ಲಿ 24 ಗಂಟೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ದಾಖಲೆಯಾಗಿದೆ. ಭಾರತದಲ್ಲಿ ಪ್ರಸ್ತುತ ಕೊರೋನಾ ಸೋಂಕಿತರ ಸಂಖ್ಯೆ 11,18,043. ಇವುಗಳಲ್ಲಿ 3,90,459 ಸಕ್ರಿಯ ಪ್ರಕರಣಗಳಾಗಿವೆ. ದೇಶದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 27,497 ಕ್ಕೆ ಏರಿಕೆಯಾಗಿದೆ . ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು ಭಾನುವಾರ ಒಂದೇ ದಿನ 9, 518 ಮಂದಿಗೆ ಸೋಂಕು ತಗುಲಿದೆ. ಇಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,10, 455ಕ್ಕೇರಿದ್ದು 258 ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…