ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,884 ಕೊರೋನಾ ಪಾಸಿಟಿವ್ ಪ್ರರಕಣ ಕಂಡುಬಂದಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ10,38,716ಕ್ಕೆ ಏರಿಕೆಯಾದ್ದು ಒಂದೇ ದಿನ 671 ಮಂದಿ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ.
10,38,716 ಮಂದಿ ಸೋಂಕಿತರ ಪೈಕಿ 6,53,751 ಮಂದಿ ಗುಣಮುಖರಾಗಿದ್ದಾರೆ ದೇಶದಲ್ಲಿ ಇನ್ನೂ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ತಿಳಿಸಿದೆ.
ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 1.40 ಕೋಟಿ ಪ್ರಕರಣ ದಾಟಿದೆ. 36 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈಗಲೂ ಪ್ರತಿನಿತ್ಯ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದ್ದಾರೆ. ಅನೇಕ ರಾಷ್ಟ್ರಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣವು ಸ್ಥಿರತೆಗೆ ಬಂದಿದ್ದು, ಲಾಕ್‌ಡೌನ್‌ನಲ್ಲಿ ವಿನಾಯಿತಿಯನ್ನು ನೀಡಲಾಗುತ್ತಿದೆ. ಸ್ಥಳೀಯ ಮಟ್ಟದ ಲಾಕ್‌ಡೌನ್ ಮಾತ್ರ ಜಾರಿ ಮಾಡಲಾಗುತ್ತಿದೆ. ಮಾರ್ಚ್ ನಂತರ ಒಟ್ಟಾರೆ ಸುಮಾರು 5.90 ಲಕ್ಷ ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…