ಸುಳ್ಯ: ದೇಶವು ಅಭಿವೃದ್ಧಿಯಾಗಿ ಲೋಕ ಕಲ್ಯಾಣ ಸಾಧ್ಯವಾಗಲು ನಮ್ಮೆಲ್ಲರಲ್ಲಿ ದೇಶ ಭಕ್ತಿ ಎಂಬ ಭಾವನೆ ಉದ್ದೀಪನಗೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದಲ್ಲಿ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಭಾವನೆಗಳು ಒಟ್ಟಾಗುವುದರ ಜೊತೆ ಕೊಡುವ ಗುಣ, ಪರಸ್ಪರ ಪ್ರೀತಿ ವಿಶ್ವಾಸಗಳು ಬೆಳೆದರೆ ಮಾತ್ರ ಪರಿವರ್ತನೆ ಸಾಧ್ಯ. ಭಜನೆ ನಮ್ಮ ಜೀವನದ ಭಾಗವಾಗಬೇಕು. ಭಕ್ತಿ ಭಾವದ ಭಜನೆಯಿಂದ ಮುಕ್ತಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್ ಅತಿಥಿಗಳಾಗಿ ಉಪಸ್ಥಿತರಿದ್ದರು.
ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ಸ್ವಾಗತಿಸಿ, ಕುಸುಮಾ ಮೋಂಟಡ್ಕ ವಂದಿಸಿದರು. ಹೇಮಲತಾ ಗಣೇಶ್ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…