ಸುಳ್ಯ: ಆಧುನಿಕ ಯುಗದ ಭರಾಟೆಯಲ್ಲಿ ದೇಸೀ ಆಟಗಳು ಮರೆತು ಹೋಗುತ್ತಿವೆ. ಸೃಜನಶೀಲತೆಯನ್ನು ಹೆಚ್ಚಿಸುವ, ಮನುಷ್ಯ-ಮನುಷ್ಯನನ್ನು ಹತ್ತಿರಕ್ಕೆತರುವ ಚೆನ್ನೆಮಣೆಯಂತಹ ಆಟಗಳನ್ನು ನೆನಪಿಸುವ ಮತ್ತುಅದನ್ನು ಪರಿಚಯಿಸುವ ರೆಡ್‍ಕ್ರಾಸ್ ಘಟಕದ ಕಾರ್ಯ ಶ್ಲಾಘನೀಯ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್‍ಕ್ರಾಸ್‍ಘಟಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಂಡ“ಆಟಿಯ ನೆನಪು”ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡ ಚೆನ್ನೆಮಣೆ ಸ್ಪರ್ಧೆಯನ್ನುಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮಾತನಾಡಿ, ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಆಟ ಚೆನ್ನೆಮಣೆ. ಇಂತಹ ಸ್ಪರ್ಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮನಸ್ಸು ಉಲ್ಲಸಿತಗೊಳ್ಳುತ್ತದೆ ಎಂದರು. ಕಾರ್ಯಕ್ರಮಾಧಿಕಾರಿಡಾ. ಅನುರಾಧಾಕುರುಂಜಿ ಮಾತನಾಡಿಜನಪದ ಆಟ ಹಾಗೂ ಆಚರಣೆಗಳು ಗ್ರಾಮೀಣಜನತೆಯ ಬದುಕಿನಲ್ಲಿ ಹಾಸುಹೊಕ್ಕಾಗಿರುತ್ತದೆ.ಅದರಲ್ಲೂಆಟಿ ತಿಂಗಳಲ್ಲಿ ಆಡುವಚೆನ್ನೆಮಣೆ ಆಟ ಬಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತೇವೆಎಂದರು.
ಕಾಲೇಜಿನ ವಿದ್ಯಾರ್ಥಿ ಸಂಘದಅಧ್ಯಕ್ಷ ಶ್ರೀಕೃಷ್ಣಪ್ರಸಾದ್, ರೆಡ್‍ಕ್ರಾಸ್‍ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೇಘಾಕೃಷ್ಣ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಜಯಮಾಲ ಸ್ವಾಗತಿಸಿ ರಚನಾ ಬಿ ಎನ್ ವಂದಿಸಿದರು. ಹವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…