ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಸಂಭಾಗಣದಲ್ಲಿ ನಡೆದ ದ್ಚಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆ ಕುರಿತು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳು ಒಳಗೊಂಡಿದ್ದು, ಮಂಗಳೂರು 24 ಪರೀಕ್ಷೆ ಕೇಂದ್ರ, ಮೂಡಬಿದ್ರೆ 04 ಪರೀಕ್ಷೆ ಕೇಂದ್ರ, ಪುತ್ತೂರು ತಾಲೂಕು 07 ಪರೀಕ್ಷೆ ಕೇಂದ್ರ, ಪುತ್ತೂರು ತಾಲೂಕು 09 ಪರೀಕ್ಷೆ ಕೇಂದ್ರ, ಬೆಳ್ತಂಗಡಿ ತಾಲೂಕು 04 ಪರೀಕ್ಷೆ ಕೇಂದ್ರ, ಸುಳ್ಯ ತಾಲೂಕು 03 ಪರೀಕ್ಷೆ ಕೇಂದ್ರ ಹೊಂದಿದೆ.
ಪರೀಕ್ಷೆಗೆ 17,137 ಬಾಲಕ ಮತ್ತು 17,209 ಬಾಲಕಿಯರು ಹಾಜರಾಗಲಿದ್ದಾರೆ. ಪರೀಕ್ಷೆಗೆ ಒಟ್ಟು 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4532 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16,237 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ಡಿ.ಡಿ.ಪಿ.ಯು. ವಿಷ್ಣು ಮೂರ್ತಿ, ಡಿ.ಪಿ.ಪಿ.ಐ ಮಲ್ಲೇಶಪ್ಪ, ಇಲಾಖೆಯ ಅಧಿಕಾರಿಗಳು, ಕಾಲೇಜು ಮುಖ್ಯಸ್ಥರು ಮತ್ತು ಮತ್ತಿತರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…