Advertisement
ಸುದ್ದಿಗಳು

ದ್ವೇಷ ರಾಜಕಾರಣಕ್ಕೆ ಟಿಪ್ಪು ಜಯಂತಿ ರದ್ದು : ಕೊಡಗು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ

Share

ಮಡಿಕೇರಿ  : ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಿಜೆಪಿ ನೇತೃತ್ವದ ಸರಕಾರ ಜನಪರವಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ತೋರದೆ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಸುಲ್ತಾನರ ಜಯಂತಿಯನ್ನು ರದ್ದುಗೊಳಿಸುವ ಮೂಲಕ ದ್ವೇಷ ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎ.ಕೆ.ಹ್ಯಾರಿಸ್ ಆರೋಪಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ದ್ವೇಷದ ರಾಜಕಾರಣ ಮಾಡುವುದಿಲ್ಲವೆಂದು ಹೇಳುತ್ತಲೇ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕೆ ತನ್ನದೇ ಆದ ರೀತಿಯ ಕೊಡುಗೆಯನ್ನು ನೀಡಿ ಕನ್ನಡನಾಡಿನ ಮನೆ ಮಾತಾಗಿದ್ದ ಟಿಪ್ಪುವಿನ ಜಯಂತಿ ಒಂದು ಅರ್ಥಪೂರ್ಣ ಆಚರಣೆಯಾಗಿದ್ದು, ಇದನ್ನು ಸ್ಥಗಿತಗೊಳಿಸಿರುವ ಬಿಜೆಪಿ ಸರಕಾರ ಆರಂಭದಲ್ಲೇ ಸಂಕುಚಿತ ಮನೋಭಾವವನ್ನು ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ.
ಸರ್ವ ಜನರನ್ನು ಸಮಾನ ರೀತಿಯಲ್ಲಿ ನೋಡುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರತಿವರ್ಷ ಟಿಪ್ಪು ಜಯಂತಿಯನ್ನು ಸರಕಾರದ ಮೂಲಕ ಆಚರಿಸುವ ನಿರ್ಧಾರಕ್ಕೆ ಬಂದರು. ಇದನ್ನು ಅಲ್ಪಸಂಖ್ಯಾತರು ಕೂಡ ಸ್ವಾಗತಿಸಿ ಜಯಂತಿಯಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ಆಚರಣೆಯಿಂದ ಮಡಿಕೇರಿ ಹೊರತು ಪಡಿಸಿದಂತೆ ಬೇರೆ ಎಲ್ಲೂ ಯಾವುದೇ ರೀತಿಯ ತೊಂದರೆಯಾಗದಿದ್ದರೂ ಬಿಜೆಪಿ ನೇತೃತ್ವದ ಸರಕಾರ ಜಯಂತಿಯನ್ನು ರದ್ದುಗೊಳಿಸಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೋವನ್ನುಂಟು ಮಾಡಿದೆ ಎಂದು ಹ್ಯಾರಿಸ್ ಬೇಸರ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 minutes ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

1 hour ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

2 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

15 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

15 hours ago