ಸವಣೂರು : ದ.ಕ. ಹಾಗೂ ಉಡುಪಿ ಜಿಲ್ಲೆಗಳ ಮರಳು ಸಮಸ್ಯೆ ಪರಿಹಾರಕ್ಕೆ ಬೆಂಗಳೂರಿನ ವಿಧಾನ ಸೌಧದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅವರ ನೇತೃತ್ವದಲ್ಲಿ ಸೆ.12ರಂದು ಸಭೆ ನಡೆಯಲಿದೆ.ಉಭಯ ಜಿಲ್ಲೆಗಳ ಸಂಸದರು,ಶಾಸಕರು,ಸಚಿವರು,ಜಿಲ್ಲಾ„ಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು,ಭೂ ವಿಜ್ಞಾನಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿಯೋಗದಿಂದ ಮನವಿ:ಜಿಲ್ಲೆಯ ಮರಳು ಸಮಸ್ಯೆ ಕುರಿತು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಜಿಲ್ಲೆಯ ನಿಯೋಗದ ವತಿಯಿಂದ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿತ್ತು. ನಿಯೋಗದ ಮನವಿಗೆ ಸ್ಪಂದಿಸಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕರೆಯುವುದಾಗಿ ಸಚಿವರು ಭರವಸೆ ನೀಡಿದ್ದರು.
ಅಲ್ಲದೆ ಇಲ್ಲಿನ ನಿಯೋಗವು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕ ಅಂಗಾರ ಅವರಿಗೂ ಮನವರಿಕೆ ಮಾಡಿದ್ದರು.
ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಸುರೇಶ್ ಕೆ ಪೆರಾಬೆ,ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ತೀರ್ಥರಾಮ ಕೆಡೆಂಜಿ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.
26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಇಂದು ರಾಷ್ಟ್ರೀಯ ರೈತ ದಿನ. ಈ ದೇಶದಲ್ಲಿ ಕೃಷಿಯ ಪ್ರಾಧಾನ್ಯತೆ ಬಹಳಷ್ಟಿದೆ. ಕೃಷಿಗಾಗಿ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಶಾಲಾ ವಠಾರದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ…
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…