ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆಯನ್ನು ಹಿರಿಯ ಪತ್ರಕರ್ತ ವೆಂಕಟೇಶ್ ಬಂಟ್ವಾಳ್ ಅವರಿಗೆ ಸಾಂಕೇತಿಕವಾಗಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಅವರು, ಸಮ್ಮೇಳನದ ವೈಶಿಷ್ಟ್ಯಗಳನ್ನು ಹಾಗೂ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರ ನೀಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರೂ,ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿರುವ ಹರೀಶ ಮಾಂಬಾಡಿ, ತಾಲೂಕು ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ, ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ, ಜತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ತಲಪಾಡಿ, ಕೋಶಾಧಿಕಾರಿ ಯಾದವ ಕುಲಾಲ್, ಸದಸ್ಯರಾದ ವೆಂಕಟೇಶ್ ಬಂಟ್ವಾಳ, ಉದಯಶಂಕರ ನೀರ್ಪಾಜೆ, ರತ್ನದೇವ್ ಪುಂಜಾಲಕಟ್ಟೆ, ವಾಮನ ಪೂಜಾರಿ, ಸಂದೀಪ್ ಸಾಲ್ಯಾನ್, ಚಂದ್ರಶೇಖರ ಕಲ್ಮಲೆ ಈ ಸಂದರ್ಭ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…