ಸುಳ್ಯ: ರಾಜ್ಯ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡಿದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ಹೇಳಿದ್ದಾರೆ.
ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಕ್ಷೇತ್ರಕ್ಕೆ ಸರಕಾರದಿಂದ ವಿಶೇಷ ಅನುದಾನ ತರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇತರ ಕ್ಷೇತ್ರಗಳಿಗೆ ಬರುವ ಅನುದಾನಕ್ಕಿಂತ ಹೆಚ್ಚು ಅನುದಾನ ಸುಳ್ಯ ಕ್ಷೇತ್ರಕ್ಕೆ ಬಂದಿದೆ. ಆದರೆ ಪ್ರಚಾರ ಆಗಿಲ್ಲ ಅಷ್ಟೇ ಎಂದು ಅವರು ಉತ್ತರಿಸಿದರು. ನಗರ ಪಂಚಾಯತ್ ಸದಸ್ಯರಿಗೆ ಅಧಿಕಾರ ನೀಡುವ ಬಗ್ಗೆ ಪ್ರಯತ್ನ ಮುಂದುವರಿಸಲಾಗಿದೆ ಅಂದು ಅವರು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel