ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್. ಸತತವಾಗಿ ವಾರಗಳಿಂದ ಕೊರೊನಾ ವೈರಸ್ ನೆಗೆಟಿವ್ ವರದಿ ಬರುತ್ತಿದೆ. ಭಾನುವಾರವೂ ಎಲ್ಲಾ ವರದಿಗಳು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಈ ನಡುವೆ ಓರ್ವ ಕೊರೊನಾ ವೈರಸ್ ಸೋಂಕಿತೆ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 12 ಮಂದಿಯಲ್ಲಿ ಗುಣಮುಖರಾಗಿ ಈಗ 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರದವರೆಗೆ ಒಟ್ಟು 38,865 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 2103 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯ ತನಕ ಸುಮಾರು 462 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, 430 ಪರೀಕ್ಷಾ ವರದಿಗಳು ಬಂದಿವೆ. ಇವುಗಳಲ್ಲಿ 418 ಪ್ರಕರಣಗಳು ನೆಗೆಟಿವ್ ವರದಿಯನ್ನು ನೀಡಿದ್ದು, 12 ಪ್ರಕರಣಗಳು ಪಾಸಿಟಿವ್ ಆಗಿದೆ. 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…