ಮಂಗಳೂರು: ದ ಕ ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ಎಲ್ಲಾ ಕೊರೊನಾ ವೈರಸ್ ವರದಿಗಳು ನೆಗೆಟಿವ್ ಆಗಿದೆ. ಒಟ್ಟು 114 ಮಂದಿಯ ಪರೀಕ್ಷಾ ವರದಿ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಜಿಲ್ಲೆಯ 113 ಮಂದಿ ಪತ್ರಕರ್ತರ ಪರೀಕ್ಷಾ ವರದಿಯೂ ನೆಗೆಟಿವ್ ಆಗಿದೆ. ಹೀಗಾಗಿ ಭಾನುವಾರ ದ ಕ ಜಿಲ್ಲೆಗೆ ನೆಮ್ಮದಿಯ ದಿನವಾಗಿದೆ. ಈ ನಡುವೆ ಸೋಮವಾರದಿಂದ ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟಗಳಿಗೆ ವಿನಾಯಿತಿ ನೀಡಲಾಗಿದೆ.
ಭಾನುವಾರ 95 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದ್ದು 16 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಒಟ್ಟು 2243 ಮಂದಿ ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ.
ದ ಕ ಜಿಲ್ಲೆಯಲ್ಲಿ ಸೋಮವಾರದಿಂದ ಜನರ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದೊಂದಿಗೆ ನಿಯಮಗಳೊಂದಿಗೆ ಓಡಾಟ ಮಾಡಬಹುದು.
ರಾಜ್ಯದಲ್ಲಿ ಭಾನುವಾರ 13 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆಯಾಗಿದೆ. 25 ಮಂದಿ ಮೃತಪಟ್ಟಿದ್ದು 293 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.ಕಲಬುರಗಿಯಲ್ಲಿ ಆರು, ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಇಂದು ಪತ್ತೆಯಾಗಿವೆ.
ಕಾಸರಗೋಡಿನಲ್ಲಿ ಸತತ 3 ನೇ ದಿನವೂ ಕೊರೊನಾ ಪಾಸಿಟಿವ್ ಹೊಸ ಪ್ರಕರಣ ದೃಢಪಟ್ಟಿಲ್ಲ. ಕೇರಳದಲ್ಲಿ ಭಾನುವಾರ ಪ್ರಕರಣ ದಾಖಲಾಗಿಲ್ಲ.ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 5 ವರೆಗೆ ವಿನಾಯಿತಿ ನೀಡಲಾಗಿದೆ.