Advertisement
MIRROR FOCUS

ದ ಕ ಜಿಲ್ಲೆಗೆ ಭಾನುವಾರ ನೆಮ್ಮದಿ | ಕೊರೊನಾ ನೆಗೆಟಿವ್ ವರದಿ | ರಾಜ್ಯದಲ್ಲಿ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ | ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆ |

Share

ಮಂಗಳೂರು: ದ ಕ ಜಿಲ್ಲೆಯಲ್ಲಿ  ಭಾನುವಾರ ಲಭ್ಯವಾದ ಎಲ್ಲಾ ಕೊರೊನಾ ವೈರಸ್ ವರದಿಗಳು ನೆಗೆಟಿವ್ ಆಗಿದೆ. ಒಟ್ಟು 114 ಮಂದಿಯ ಪರೀಕ್ಷಾ ವರದಿ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಜಿಲ್ಲೆಯ 113 ಮಂದಿ ಪತ್ರಕರ್ತರ ಪರೀಕ್ಷಾ ವರದಿಯೂ ನೆಗೆಟಿವ್ ಆಗಿದೆ. ಹೀಗಾಗಿ ಭಾನುವಾರ ದ ಕ ಜಿಲ್ಲೆಗೆ  ನೆಮ್ಮದಿಯ ದಿನವಾಗಿದೆ. ಈ ನಡುವೆ ಸೋಮವಾರದಿಂದ  ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟಗಳಿಗೆ ವಿನಾಯಿತಿ ನೀಡಲಾಗಿದೆ.

Advertisement
Advertisement
Advertisement

ಭಾನುವಾರ 95 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದ್ದು 16 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಒಟ್ಟು 2243 ಮಂದಿ ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. 

Advertisement

ದ ಕ ಜಿಲ್ಲೆಯಲ್ಲಿ ಸೋಮವಾರದಿಂದ ಜನರ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದೊಂದಿಗೆ ನಿಯಮಗಳೊಂದಿಗೆ ಓಡಾಟ ಮಾಡಬಹುದು.

ರಾಜ್ಯದಲ್ಲಿ ಭಾನುವಾರ 13 ಹೊಸ ಕೊರೊನಾ ಪಾಸಿಟಿವ್  ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆಯಾಗಿದೆ. 25 ಮಂದಿ ಮೃತಪಟ್ಟಿದ್ದು  293 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.ಕಲಬುರಗಿಯಲ್ಲಿ ಆರು, ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಇಂದು ಪತ್ತೆಯಾಗಿವೆ.

Advertisement

ಕಾಸರಗೋಡಿನಲ್ಲಿ ಸತತ 3 ನೇ ದಿನವೂ ಕೊರೊನಾ ಪಾಸಿಟಿವ್ ಹೊಸ ಪ್ರಕರಣ ದೃಢಪಟ್ಟಿಲ್ಲ. ಕೇರಳದಲ್ಲಿ ಭಾನುವಾರ ಪ್ರಕರಣ ದಾಖಲಾಗಿಲ್ಲ.ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 5 ವರೆಗೆ ವಿನಾಯಿತಿ ನೀಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ ಬಾರಿಯ ಬಜೆಟ್‌ನಲ್ಲಿ ಅಡಿಕೆ ಬೆಳೆ ರಕ್ಷಣೆಗೆ 67 ಕೋಟಿ ರೂಪಾಯಿ ನಿರೀಕ್ಷೆ | ಕರ್ನಾಟಕ ಸರ್ಕಾರದಿಂದಲೂ ತನ್ನ ಪಾಲನ್ನು ಮೀಸಲಿಡಲು ಒತ್ತಾಯ |

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…

10 hours ago

ವರ್ಷದ ಬಳಿಕ ಮನೆಗೆ ಸೇರಿದ ಬಿಹಾರದ ಮಹಿಳೆ | ಪುನರ್ಜನ್ಮ ನೀಡಿದ ಸಾಯಿನಿಕೇತನ ಸೇವಾಶ್ರಮ |

ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…

19 hours ago

ಮಕ್ಕಳ ಭ್ರಮೆ ಮತ್ತು ವಾಸ್ತವ

ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…

24 hours ago

ಮುಂದಿನ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…

24 hours ago

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |

ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…

1 day ago

ರೈತ ಉಪಯೋಗಿ ಬಗೆ ಬಗೆಯ ಸರಕು ಸಾಗಣೆ ಗಾಡಿಗಳು

ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…

2 days ago