ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 3 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರ ಜೊತೆ ಬಂಟ್ವಾಳದ ಮೃತ ಮಹಿಳೆಯ 16 ವರ್ಷದ ಮಗಳಿಗೂ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಸದ್ಯ 13 ಸಕ್ರಿಯ ಕೊರೊನಾ ಪಾಸಿಟಿವ್ ಪ್ರಕರಣಗಳು ಇದೆ.
ಫಸ್ಟ್ ನ್ಯೂರೋದ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ 58 ವರ್ಷದ ಮಹಿಳೆಯಿಂದ ಮತ್ತೆ ಇಬ್ಬರಿಗೆ ವೈರಸ್ ಹರಡಿರುವುದು ಈಗ ಖಚಿತವಾಗಿದೆ. ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢಪಟ್ಟರೆ , ಈಗಾಗಲೇ 58 ವರ್ಷದ ಮಹಿಳೆಯ ಪತಿ, ಆಕೆಯ ಅಳಿಯನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈ ಮೂಲಕ ಒಂದೇ ಕುಟುಂಬದ 4 ಜನರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …