Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಇನ್ನೊಂದು ಸೀಲ್ಡೌನ್ ಪ್ರದೇಶ | ಉಡುಪಿ- ಕಾಸರಗೋಡಿನಲ್ಲಿ ಗುರುವಾರ ನೆಮ್ಮದಿ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಗುರುವಾರ  ಒಬ್ಬರು ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರು ಸಂಜೆಯ ವೇಳೆಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ಪಟ್ಟಣ ಹಾಗೂ ಮಂಗಳೂರಿನ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆಯ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್  ಘೋಷಣೆ ಮಾಡಲಾಗಿದೆ.

ಗುರುವಾರ ಉಸಿರಾಟದ ಸಮಸ್ಯೆಯಿಂದ 14 ಮಂದಿಯ ಪ್ರಕರಣ ದಾಖಲಾಗಿದ್ದು ಇವುಗಳಲ್ಲಿ 8  ಪ್ರಕರಣಗಳನ್ನು  ವೆನ್ಲಾಕ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಒಟ್ಟು 39 ಮಂದಿಯನ್ನು  ನಿಗಾದಲ್ಲಿ ಇರಿಸಲಾಗಿದೆ. 376 ಮಂದಿಯ ರಕ್ತ ಪರೀಕ್ಷೆಯ ವರದಿ ಬರಲು ಬಾಕಿ ಇದೆ. 214 ಮಂದಿಯ ತಪಾಸಣಾ ವರದಿ ಬಂದಿತ್ತು, ಅದರಲ್ಲಿ  1 ಪಾಸಿಟಿವ್ ಕಂಡುಬಂದಿತ್ತು. ಉಳಿದ 213 ಮಂದಿಯದ್ದು ನೆಗೆಟಿವ್ ವರದಿ ಕಂಡುಬಂದಿತ್ತು. ಇಂದು ಕೂಡಾ 95 ಮಂದಿ ಗಂಟಲ ದ್ರವ ತಪಾಸಣೆಗೆ ಕಳುಹಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ  ಯಾವುದೇ ಪ್ರಕರಣ ದಾಖಲಾಗಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಯಾವುದೇ ಹೊಸ ಪ್ರಕರಣ ಕಂಡುಬಂದಿಲ್ಲ. ಇನ್ನು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago