ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಮಾಡುವಂತೆ ಸಂಸದ ನಳೀನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಲಾಕ್ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ನಳೀನ್ ಕುಮಾರ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ವಿಡಿಯೋ ಕಾನ್ಫರೆನ್ಸ್ ಬಳಿಕ ದ.ಕ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಲಾಕ್ಡೌನ್ ಕುರಿತು ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.