ಮಂಗಳೂರು: ಕೊರೊನಾ ವೈರಸ್ ಪಾಸಿಟಿವ್ ಬಂದ ಬಂಟ್ವಾಳದ ಮಹಿಳೆ ಸಂಜೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ 2 ನೇ ಬಲಿಯಾದರೆ, ಇಬ್ಬರೂ ಒಂದೇ ಕುಟುಂಬವರು ಎನ್ನುವುದು ಆಘಾತಕಾರಿ ಸಂಗತಿಯಾಗಿದೆ.
ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲಿ ಗುರುವಾರ ಬೆಳಗ್ಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಂಟ್ವಾಳದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಮೃತ ಮಹಿಳೆ ಪಾರ್ಶ್ವವಾಯು ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಬೆಳಗ್ಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು ಕಂಡುಬಂದಿತ್ತು.
ರಾಜ್ಯದಲ್ಲಿ ಇಂದು ಒಂದೇ 18 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಲ್ಲಿಯವರೆಗೆ ಬಂಟ್ವಾಳದ ಮಹಿಳೆ ಸೇರಿದಂತೆ 18 ಜನರು ಮೃತಪಟ್ಟಿದ್ದು, 145 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…