ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಕಳೆದ ವಾರ ಕಾಣಿಸಿಕೊಂಡಿದ್ದ ‘ಕ್ಯಾರ್’ ಚಂಡಮಾರುತವು ಒಮಾನ್ ತೀರದತ್ತ ತನ್ನ ದಿಕ್ಕು ಬದಲಿಸಿದರೂ ಕೂಡ ಮಂಗಳವಾರ ಸಂಜೆಯಿಂದ ಜಿಲ್ಲೆಯ ಹಲವು ಕಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ.
ಎರಡು ದಿನದಿಂದ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣವಿತ್ತು. ಆದರೆ ಮಂಗಳವಾರ ರಾತ್ರಿಯ ವೇಳೆಗೆ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚಿನ ಮಳೆ ಸುರಿದಿದೆ. ಜಿಲ್ಲೆಯ ಮಂಗಳೂರು, ಉಳ್ಳಾಲ, ಬಂಟ್ವಾಳ, ವಿಟ್ಲ ಸಹಿತ ವಿವಿಧೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಸುಳ್ಯ ತಾಲೂಕಿನಲ್ಲಿಯೂ ಕೆಲವೆಡೆ ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅದು ಚಂಡಮಾರುತವಾಗಿ ಮಾರ್ಪಾಡಾಗಿ ಮತ್ತೆ ಮಳೆಯಾಗುವ ಸಾಧ್ಯತೆಯ ಬಗ್ಗೆಯೂ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ಇನ್ನೂ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…