ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಇನ್ನೊಂದು ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರಿನ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಳ್ಳಾಲದ ಸೋಮೇಶ್ವರದ ದಾರಂದಬಾಗಿಲು ಪ್ರದೇಶದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಮಹಿಳೆಗೆ ಫಸ್ಟ್‌ನ್ಯೂರೋ ಸಂಪರ್ಕದಿಂದ ಸೋಂಕು ಹರಡಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.
ಈ ನಡುವೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮಹಿಳೆಗೆ ಎ.30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.
ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವೈರಸ್ ಗೆ ಜಗತ್ತಿನಾದ್ಯಂತ 4,531 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. 180 ಕ್ಕೂ ಅಧಿಕ ದೇಶಗಳಲ್ಲಿ ಪಸರಿಸಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,238,703ಕ್ಕೆ ಏರಿಕೆಯಾಗಿದೆ. ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಬಳಿಕ ರಷ್ಯಾ ಇದ್ದು, ಸ್ಪೇನ್ ನಲ್ಲಿ ಅಧಿಕ ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್ ಇದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…