ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಗಳಾಗಿದ್ದು ಫಸ್ಟ್ ನ್ಯೂರೋ ಸಂಪರ್ಕದಿಂದ ಇಬ್ಬರಿಗೆ ಸೋಂಕು ದೃಢವಾಗಿದೆ. 50 ವರ್ಷದ ಮಹಿಳೆ ಹಾಗೂ 26 ವರ್ಷದ ಯುವಕನಿಗೆ ಪಾಸಿಟಿವ್ ಬಂದಿತ್ತು. ಇವರನ್ನು ಮಂಗಳೂರಿನಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.
ರಾಜ್ಯದಲ್ಲಿ ಒಂದೇ ದಿನ ಹೊಸದಾಗಿ 42 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೇರಿಕೆಯಾಗಿದೆ. ಒಟ್ಟು 32 ಜನರು ಮೃತಪಟ್ಟಿದ್ದು, 426 ಜನರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel