ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬಂಟ್ವಾಳದಲ್ಲಿ ಕ್ವಾರಂಟೈನ್ ನಲ್ಲಿದ್ದ 3 ಜನರಿಗೆ ಮತ್ತೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೆಲ್ಲವೂ ಕೂಡಾ ಫಸ್ಟ್ ನ್ಯೂರೋದಿಂದಲೇ ಹರಡಿರುವ ಬಗ್ಗೆ ಇದೀಗ ಖಚಿತವಾಗುತ್ತಿದೆ.
ಬಂಟ್ವಾಳದ 60 ವರ್ಷದ ಮಹಿಳೆ ಹಾಗೂ 70 ವರ್ಷದ ವೃದ್ಧೆಗೆ ಹಾಗೂ 30 ವರ್ಷದ ಪುರುಷನಿಗೆ ಕೊರೊನಾ ಇರುವುದು ಈಗ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಅದರಲ್ಲಿ ಬಂಟ್ವಾಳದಲ್ಲೇ 9 ಪ್ರಕರಣವಾಗಿದೆ. ಬಂಟ್ವಾಳದ ಕಂಟೈನ್ಮೆಂಟ್ ಝೋನ್ ಕಸಬಾ ಗ್ರಾಮದ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ತಗುಲಿದೆ.
ಮೇ.1 ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ 69 ವರ್ಷದ ವೃದ್ಧನ ಕುಟುಂಬದ ಕುಟುಂಬದ 3 ಜನರಿಗೆ ಸೋಂಕು ದೃಢವಾಗಿದೆ. ಬಂಟ್ವಾಳದಲ್ಲಿ ಮೃತಪಟ್ಟ ಮಹಿಳೆಯ ನೆರೆಮನೆಯವರು ಹಾಗೂ ಸಂಬಂಧಿಕರಾಗಿದ್ದ ವೃದ್ಧನಿಗೆ ವೈರಸ್ ಹರಡಿತ್ತು, ಹೀಗಾಗಿ ಆ ಮನೆಯ 8 ಜನರನ್ನು ಕ್ವಾರಂಟೈನ್ ಗೆ ಮಾಡಲಾಗತ್ತು, ಇದೀಗ ಅವರಲ್ಲಿ 3 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ದ ಕ ಜಿಲ್ಲೆಯಲ್ಲಿ 15 ಸಕ್ರಿಯ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ.
ರಾಜ್ಯದಲ್ಲಿ ಶನಿವಾರ ಬೆಳಗ್ಗೆ ಒಟ್ಟು 36 ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಬೆಂಗಳೂರು ನಗರದಲ್ಲಿ 12 , ಭಟ್ಕಳದಲ್ಲಿ 7 ಹಾಗೂ ದ ಕ ಜಿಲ್ಲೆಯಲ್ಲಿ 3 ಪ್ರಕರಣ ಕಂಡುಬಂದಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 789 ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 379 ಮಂದಿ ಗುಣಮುಖರಾಗಿದ್ದಾರೆ.30 ಮಂದಿ ಮೃತಪಟ್ಟಿದ್ದಾರೆ.
ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದೆ. ದೇಶದಲ್ಲಿ ಒಂದೇ ದಿನ 3320 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 59,695 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 17847 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 1,985 ಜನರು ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 39834 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ವಿಶ್ವಾದ್ಯಂತ 40 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. 2.76 ಲಕ್ಷ ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. 13.85 ಲಕ್ಷ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಮೆರಿಕದಲ್ಲಿ 78,615 ಜನರು ಕೊರೊನಾಗೆ ಬಲಿಯಾಗಿದ್ದು, 13.21 ಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದಾರೆ.