ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 22 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ. ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿತ್ತು. ಕೊರೊನಾ ದೃಢವಾದ ಹಿನ್ನಲೆಯಲ್ಲಿ ಇದೀಗ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1,718 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಬಲಿಯಾಗಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.