ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 48 ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ 7 ಹೊಸ ಪ್ರಕರಣ , ಬೆಳಗಾವಿಯಲ್ಲಿ 11 ಪ್ರಕರಣ, ದಾವಣಗೆರೆಯಲ್ಲಿ 14 ಪ್ರಕರಣಗಳು ದೃಢಪಟ್ಟಿವೆ. ಉತ್ತರ ಕನ್ನಡದ ಭಟ್ಕಳದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ.
ಭಟ್ಕಳದ 5 ತಿಂಗಳ ಹೆಣ್ಣು ಮಗು, 3 ವರ್ಷದ ಬಾಲಕಿ, ದಾವಣಗೆರೆಯ 8 ವರ್ಷದ ಬಾಲಕ, 13 ವರ್ಷದ ಬಾಲಕಿ, 3 ವರ್ಷದ ಬಾಲಕಿ, 9 ವರ್ಷದ ಬಾಲಕಿ, 10 ವರ್ಷದ ಬಾಲಕನೂ ಸೇರಿದ್ದಾನೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ, 30 ಜನರು ಮೃತಪಟ್ಟಿದ್ದಾರೆ. 371 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದರಲ್ಲಿ ಭಟ್ಕಳದ ಮಗುವಿಗೆ ಚಿಕಿತ್ಸೆಗಾಗಿ ಪೋಷಕರು ಮಂಗಳೂರು ಫಸ್ಟ್ ನ್ಯೂರೋ ಆಗಮಿಸಿದ್ದರು, ಇದರಿಂದ ಅಲ್ಲೂ ಈಗ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಇದೀಗ ಭಟ್ಕಳದಲ್ಲೂ ತಲೆನೋವು ಹೆಚ್ಚಾಗಿದೆ.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…