ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಉಡುಪಿ ಜಿಲ್ಲೆಯು ಇಂದು ಕೊರೊನಾ ವೈರಸ್ ಮುಕ್ತ ಜಿಲ್ಲೆಯಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಕರ್ನಾಟಕದಲ್ಲಿ ಒಂದೇ ದಿನ 29 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆಯವರೆಗೆ ಯಾವುದೇ ಕೊರೊನಾ ಪಾಸಿಟಿವ್ ವರದಿಗಳು ಪತ್ತೆಯಾಗಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಮಹಿಳೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ಈ ಮೂಲಕ ಕೊರೊನಾ ಮುಕ್ತ ಜಿಲ್ಲೆಯಾಗಿದೆ.ಕೊರೊನಾ ಸೋಂಕಿತೆ ಗರ್ಭಿಣಿಯ ಪತಿಯು ಗಲ್ಫ್ ದೇಶದಿಂದ ಮರಳಿದ್ದು ಪತ್ನಿಗೆ ಸೋಂಕು ತಗುಲಿತ್ತು. ಸೋಂಕಿತೆ ಗರ್ಭಿಣಿಯಾದ ಕಾರಣದಿಂದಾಗಿ ಈ ಪ್ರಕರಣದ ಮೇಲೆ ಹೆಚ್ಚಿನ ನಿಗಾ ವಹಿಸಿ ಉಡುಪಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ ಒಂದೇ ದಿನ ಬರೋಬ್ಬರಿ 29 ಮಂದಿಯಲ್ಲಿ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿಯೇ 19 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಂಜೆಯ ವೇಳೆಗೆ ರಾಜ್ಯದ ಎಲ್ಲಾ ಪ್ರಕರಣಗಳು ಸೇರಿ ಒಟ್ಟು 29 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದುವರೆಗೆ 18 ಜನರು ಮೃತಪಟ್ಟಿದ್ದು, 145 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ.ಇಡೀ ಕೇರಳದಲ್ಲಿ ಒಟ್ಟು 3 ಪ್ರಕರಣ ಮಾತ್ರಾ ಕಂಡುಬಂದಿದೆ. ಈ ಮೂಲಕ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 450 ಕ್ಕೆ ಏರಿಕೆಯಾಗಿದೆ. ಒಟ್ಟು 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.