ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೊನ್ನೆಯಾಗಿದ್ದ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಇದೀಗ ಬೆಂಬಿಡದೆ ಕಾಡುತ್ತಿದೆ. ಈಚೆಗೆ ಸಮುದಾಯಕ್ಕೆ ಹರಡಲು ಆರಂಭವಾಗಿದ್ದು , ಮೂಲ ಪತ್ತೆ ಕಷ್ಟವಾಗುತ್ತಿದೆ. ಇದೀಗ ವೈದ್ಯರು, ನರ್ಸ್ , ಲ್ಯಾಬ್ ಸಿಬಂದಿಗಳು, ಪೊಲೀಸ್ ಸಿಬಂದಿಗಳಲ್ಲೂ ಕೊರೋನಾ ಪಾಸಿಟಿವ್ ಕಂಡುಬರುತ್ತಿದೆ. ಗುರುವಾರ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಲ್ಯಾಬ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮುಂದಿನ ಕೆಲವು ದಿನಗಳ ಕಾಲ ತೀರಾ ಎಚ್ಚರಿಕೆ ಬೇಕಾಗಿದ್ದು ಪ್ರತೀ ಗ್ರಾಮದಲ್ಲೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.
ಗುರುವಾರ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…