ಮಂಗಳೂರು: ದ ಕ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ.
ದ ಕ ಜಿಲ್ಲೆಯ 14 ಪ್ರಕರಣಗಳಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ 17 ವರ್ಷದ ಬಾಲಕನಲ್ಲಿ ಪತ್ತೆಯಾಗಿದೆ. ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲು ಪ್ರದೇಶದ 17 ವರ್ಷದ ಬಾಲಕನಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ರಾಜ್ಯದಲ್ಲಿ 141 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 90 ಜನ ಬೇರೆ ರಾಜ್ಯಗಳ ಪ್ರಯಾಣಿಕರಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿವ್ ಪ್ರಕಾರ 103 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 997 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು 33 ಪ್ರಕರಣಗಳು, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6 ಪ್ರಕರಣಗಳು ದಾಖಲಾಗಿವೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.