ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ ಬಿಟ್ಟಿರಲಿಲ್ಲ. ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದಲ್ಲಿ ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…