Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ 311 ಕೊರೋನಾ ಪಾಸಿಟಿವ್‌ ಕೇಸ್‌ | ಕೇಳಿಸಿದೆ ಎಚ್ಚರಿಕೆಯ ಗಂಟೆ – ಪಾಲಿಸಿರಿ ಲಾಕ್ಡೌನ್‌ ನಿಯಮ |

Share

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರದಂದು 311  ಮಂದಿಯಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಕಂಡುಬಂದಿದೆ. ದಿನಂದ ದಿನಕ್ಕೆ ಪ್ರಕರಣ ಹೆಚ್ಚಾಗುತ್ತಿದ್ದು ಲಾಕ್ಡೌನ್‌ ನಿಯಮ ಪಾಲನೆಯಾಗಬೇಕು ಎಂಬ ಎಚ್ಚರಿಕೆಯ ಸಂದೇಶ ಇದೀಗ ಕಂಡುಬಂದಿದೆ.

ಶುಕ್ರವಾರದಂದು 311  ಮಂದಿಯಲ್ಲಿ  ಕೊರೋನಾ ಪಾಸಿಟಿವ್‌  ಕಂಡುಬರುವ ಮೂಲಕ  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ. ಈಗ 1725 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಶುಕ್ರವಾರ 84 ಜನರಲ್ಲಿ ಕೊರೋನಾ ಪಾಸಿಟಿವ್‌ ಪತ್ತೆಯಾಗಿದ್ದು  ಜಿಲ್ಲೆಯಲ್ಲಿ ಒಟ್ಟು   1979 ಪ್ರಕರಣ ದಾಖಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ  ಶುಕ್ರವಾರ 32 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ  3,693 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರ 1028 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 20757 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಬೆಂಗಳೂರು ನಗರದಲ್ಲಿ 2,208 ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಶುಕ್ರವಾರ ಒ ಟ್ಟು 3,693 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಶುಕ್ರವಾರದಂದು ಒಂದೇ ದಿನ ರಾಜ್ಯದಲ್ಲಿ 115 ಮಂದಿ  ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 1,147 ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

3 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

5 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

11 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

11 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

19 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

19 hours ago